ಬೆಂಗಳೂರು, ಆ. 31 (DaijiworldNews/MB) : ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದು ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ ಮೋಸಗೊಳಿಸಿದ ಪರಿಣಾಮವಿದು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ವಿಶ್ವದ ಕೊರೊನಾ ಪ್ರಕರಣಗಳ ಪಟ್ಟಿಯಲ್ಲಿ ಭಾರತವು ಮೂರನೇ ಸ್ಥಾನದಲ್ಲಿರುವುದನ್ನು ಟ್ವೀಟ್ ಮಾಡಿರುವ ಅವರು, ''ಗಂಟೆ ಬಾರಿಸಿ.,ಚಪ್ಪಾಳೆ ತಟ್ಟಿ., ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ ಮೋಸಗೊಳಿಸಿದ ಪರಿಣಾಮವಿದು..! ಬಿಜೆಪಿ ಘೋಷಿತ 'ವಿಶ್ವಗುರು'ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ..?'' ಎಂದು ಪ್ರಶ್ನಿಸಿದ್ದಾರೆ.
''ಕೆಲವು ದಿನಗಳಲ್ಲಿ ವಿಶ್ವದಲ್ಲೇ ೧ನೆ ಸ್ಥಾನಕ್ಕೆ ಭಾರತ ಏರುವುದು ನಿಸ್ಸಂದೇಹ. ಜನಸಂಖ್ಯೆ ಹೆಚ್ಚಿರುವುದರಿಂದ ಇದು ಆಶ್ಚರ್ಯಕರ ಸಂಗತಿ ಅಲ್ಲ. ಆದ್ರೆ ನೆರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ವೈಫಲ್ಯ ಸ್ಪಷ್ಟವಾಗುತ್ತದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಬರ್ಮಾ, ಶ್ರೀಲಂಕಾ, ಅಫಘಾನಿಸ್ತಾನ, ಭೂತಾನ್, ಚೀನಾ ನಮಗಿಂತ ಉತ್ತಮ ಸ್ಥಿತಿಯಲ್ಲಿದ್ದಾರೆ'' ಎಂದು ಹೇಳಿದ್ದಾರೆ.
ಸೋಂಕು