ಕಲಬುರಗಿ,ಆ 31(DaijiworldNews/HR): ಕರ್ನಾಟಕದಲ್ಲಿ ಡ್ರಗ್ಸ್ ಗೆ ಕಡಿವಾಣ ಹಾಕಲು ಸರ್ಕಾರ ಪ್ರಯತ್ನಿಸುತ್ತಿದ್ದು ಅದಕ್ಕೆ ಚಿತ್ರರಂಗ ಸೇರಿ ಎಲ್ಲರೂ ಸರ್ಕಾರಕ್ಕೆ ಸಹಕಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾಗರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆ ವಿರುದ್ಧ ಸರ್ಕಾರ ದಿಟ್ಟವಾದ ಕ್ರಮ ಕೈಗೊಳ್ಳುತ್ತಿದ್ದು,ದಂಧೆಯಲ್ಲಿ ಭಾಗವಹಿಸಿದ್ದವರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಇನ್ನು ಇಂದ್ರಜಿತ್ ಲಂಕೇಶ್ ಅವರಿಗೆ ರಕ್ಷಣೆ ನೀಡಲಾಗುತ್ತಿದೆ. ಈ ದಂಧೆ ಬಗ್ಗೆ ಯಾರೇ ಮಾಹಿತಿ ನೀಡಲು ಮುಂದೆ ಬಂದರೂ, ಅವರಿಗೆ ಸೂಕ್ತ ರಕ್ಷಣೆ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಇದೇ ಸಂಧರ್ಭದಲ್ಲಿ ಸರ್ಕಾರವನನ್ನು ಟೀಕಿಸುವವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಕಾರಣದಿಂದಾಗಿ ಸರ್ಕಾರ ಸೇರಿ ಎಲ್ಲ ಕ್ಷೇತ್ರಗಳ ಆರ್ಥಿಕ ವ್ಯವಸ್ಥೆ ಕುಸಿದು ಹೋಗಿದೆ. ಇದನ್ನು ಪುನಶ್ಚೇತನಗೊಳಿಸಲು ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿ, ಹಾಗೂ ರಾಜ್ಯದಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಟೀಕಿಸಲು ಪ್ರತಿಪಕ್ಷಗಳಿಗೆ ಯಾವುದೇ ವಿಷಯವಿಲ್ಲ. ಹೀಗಾಗಿ ಸಿದ್ದರಾಮಯ್ಯರಂತಹ ನಾಯಕರು ವಿನಾಕಾರಣ ಕಟುಟೀಕೆ ಮಾಡಬಾರದು ಎಂದಿದ್ದಾರೆ.