ನವದೆಹಲಿ, ಆ 31(DaijiworldNews/HR):ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಮೆದುಳು ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ದೀರ್ಘಕಾಲ ಕೋಮಾದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
1935 ಡಿಸೆಂಬರ್ 11 ರಂದು ಜನಿಸಿದ್ದ ಪ್ರಣಬ್ ಮುಖರ್ಜಿ ಭಾರತೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದರು. ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಕಿಂಕರ ಮುಖರ್ಜಿ ರಾಜಲಕ್ಷ್ಮಿ ದಂಪತಿಯ ಜನಿಸಿದ ಅವರು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಬಿ, ಎಂಎ ಎಲ್.ಎಲ್.ಬಿ. ಪದವಿ ಪಡೆದಿದ್ದರು.
1957 ರ ಜುಲೈ 3 ರಂದು ಸುವ್ರಾ ಅವರನ್ನು ಮದುವೆಯಾಗಿದ್ದ ಅವರಿಗೆ ಇಬ್ಬರು ಪುತ್ರರು ಓರ್ವ ಪುತ್ರಿ ಇದ್ದಾರೆ.