ಬೆಂಗಳೂರು, ಸೆ. 01 (DaijiworldNews/MB) : ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಸಿಸಿಬಿ ಪೊಲೀಸರು ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಡಿಜೆ ಹಳ್ಳಿ, ಕೆ.ಜಿ.ಹಳ್ಳಿ, ಹಲಸೂರು ಗೇಟ್ನಲ್ಲಿರುವ ಎಸ್ಡಿಪಿಐ ಪಕ್ಷದ ಕಚೇರಿಗಳಲ್ಲಿ ಶೋಧ ನಡೆಸಲಾಗಿದ್ದು ದಾಖಲೆಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಈ ಘಟನೆಗೆ ಸಂಬಂಧಿಸಿ ಎಸ್ಡಿಪಿಐ ಕಾರ್ಯಕರ್ತ, ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಮುಜಾಮಿಲ್ ಪಾಷಾನನ್ನು ಸಿಸಿಬಿ ಬಂಧಿಸಿದೆ.