ಬೆಂಗಳೂರು, ಸೆ.1(DaijiworldNews/HR): ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಸಚಿವ ಈಶ್ವರಪ್ಪ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಈಶ್ವರಪ್ಪ ‘ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.’ ಎಂದು ಟ್ವೀಟ್ ಮಾಡಿದ್ದಾರೆ.
ಇದೀಗ ಸಚಿವ ಈಶ್ವರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಪರಿಣಾಮ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕ್ವಾರೆಂಟೈನ್ಗೆ ಒಳಗಾಗಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರಿಗೂ ಈ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದು ಗುಣಮುಖರಾಗಿದ್ದಾರೆ. ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಶಶಿಕಲಾ ಜೊಲ್ಲೆ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.