ನವದೆಹಲಿ, ಸೆ. 02 (DaijiworldNews/MB) : ಕಾಂಗ್ರೆಸ್ ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಅಥವಾಲೆ ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ''ಕಾಂಗ್ರೆಸ್ ಅಧ್ಯಕ್ಷರ ವಿಚಾರದಲ್ಲಿ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಉಂಟಾಗಿದೆ. ಬಿಜೆಪಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ವಿರುದ್ದ ರಾಹುಲ್ ಗಾಂಧಿ ಅವರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಬ್ಬರು ಕೂಡಾ ಜ್ಯೋತಿರಾಧಿತ್ಯ ಸಿಂಧಿಯಾ ಅವರಂತೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಬೇಕು ಎಂದು ಇಬ್ಬರಲ್ಲಿ ಅಥವಾಲೆ ಅವರು ಮನವಿ ಮಾಡಿದ್ದಾರೆ. ಹಾಗೆಯೇ ಈ ಸಂದರ್ಭದಲ್ಲಿ ಬಿಜೆಪಿ ಹಲವು ವರ್ಷಗಳ ಕಾಲ ಜಯ ಗಳಿಸಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕೂಡ 350ಕ್ಕೂ ಹೆಚ್ಚು ಸೀಟುಗಳನ್ನು ಬಿಜೆಪಿ ಪಾಲಾಗಲಿದೆ'' ಎಂದು ಹೇಳಿದರು.