ಚಿಕ್ಕಬಳ್ಳಾಪುರ, ಸೆ 03 (DaijiworldNews/PY): ಸೆಪ್ಟೆಂಬರ್ 7ರಿಂದ ನಂದಿಗಿರಿಧಾಮ ಪ್ರವಾಸಿಗರಿಗೆ ಮುಕ್ತವಾಗಲಿದೆ.
ಸೆಪ್ಟೆಂಬರ್ 7ರಿಂದ ಪ್ರತಿದಿನ ಬೆಳಗ್ಗೆ 8ರಿಂದ 5 ಗಂಟೆಯವರೆಗೆ ಮಾತ್ರವೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಕೊರೊನಾ ಹಿನ್ನೆಲೆ ವಿಶ್ವವಿಖ್ಯಾತ ನಂದಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನ್ಲಾಕ್ 4.0 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಬಳಿಕ ನಂದಿಗಿರಿಧಾಮದ ಪ್ರವೇಶಕ್ಕೆ ಹೇರಲಾಗಿದ್ದ ನಿಷೇಧವನ್ನು ತೆರವುಮಾಡಲಾಗಿದೆ.