ಬೆಂಗಳೂರು, ಸೆ 03 (DaijiworldNews/PY): ಸ್ಯಾಂಡಲ್ವುಡ್ನ ಕೆಲವು ನಟ-ನಟಿಯರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ ಎನ್ನುವ ಆರೋಪಗಳ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೊಟೀಸ್ ಜಾರಿ ಮಾಡಿದೆ. ಈ ಬೆನ್ನಲ್ಲೇ ಕನ್ನಡದ ಹೆಸರಾಂತ ನಟಿಯೊಬ್ಬರು ಪರಾರಿಯಾಗಿದ್ದಾರೆ.
ಸ್ಯಾಂಡಲ್ವುಡ್ನ ಕೆಲವು ನಟ-ನಟಿಯರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಹೇಳಿಕೆ ನೀಡಿದ್ದು, ಎಲ್ಲರಿಗೂ ಶಾಕ್ ನೀಡಿದೆ. ಈ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಜಾಲ ಪತ್ತೆಮಾಡಲು ತನಿಖೆ ಕೈಗೊಂಡಿದ್ದಾರೆ.
ಈ ನಡುವೆ ಕಳೆದ 15 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಟಿಯೊಬ್ಬರು ರಾಜ್ಯದಿಂದ ಪರಾರಿಯಾಗಿದ್ದಾರೆ. ಈ ನಟಿ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾ ನೀಡುತ್ತಿದ್ದು, ಸಿನಿಮಾ ಬೇಡಿಕೆ ಕಡಿಮೆಯಾಗುತ್ತಿದ್ದ ಕಾರಣ ಪಾರ್ಟಿಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದರು ಎನ್ನಲಾಗಿದೆ. ಈ ನಟಿಯ ಹೆಸರು ಡ್ರಗ್ಸ್ ದಂಧೆಯಲ್ಲಿ ಮೊದಲು ಕೇಳಿಬಂದಿದೆ ಎನ್ನಲಾಗಿದೆ.
ಸಿಸಿಬಿ ಅಧಿಕಾರಿಗಳು ರಾಗಿಣಿ ಅವರಿಗೂ ನೊಟೀಸ್ ಜಾರಿ ಮಾಡಿದ್ದಾರೆ. ಅಲ್ಲದೇ, ರಾಗಿಣಿ ಅವರ ಗೆಳೆಯ ಜಯನಗರದ ಆರ್ ಟಿಒ ಅಧಿಕಾರಿ ರವಿಶಂಕರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಬಳಿಕ ಇಂದು 10ಗಂಟೆಗೆ ರಾಗಿಣಿಗೂ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ.
ರಾಗಿಣಿ ದ್ವಿವೇದಿ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡುತ್ತಿದ್ದಂತೆಯೇ ಇವರು ತಮ್ಮ ಮ್ಯಾನೇಜರ್ನೊಂದಿಗೆ ರಾಜ್ಯ ಬಿಟ್ಟಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.