ಬೆಂಗಳೂರು, ಸೆ. 3(DaijiworldNews/HR):ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ದಂಧೆಯ ನಂಟಿನ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ವಿಚಾರಣೆಗೆ ಇಂದು ಹಾಜರಾಗುವಂತೆ ಸಿಸಿಬಿ ಪೊಲೀಸರು ನೊಟೀಸ್ ನೀಡಿದ್ದು, ಇವತ್ತು ಬರಲ್ಲ, ವಿಚಾರಣೆಗೆ ಸೋಮವಾರ ಬರ್ತಿನಿ ಎಂದು ರಾಗಿಣಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಾಗಿಣಿ, ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ಇದನ್ನು ನಾನು ನನ್ನ ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ ಎಂಬುದಾಗಿ ಟ್ವೀಟ್ ಮಾಡಿದ್ದಾರೆ.
ನನ್ನ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ, ಜವಾಬ್ದಾರಿಯುತ ನಾಗರಿಕಳಾಗಿ ಕಾನೂನು ಮತ್ತು ಅದರ ಪ್ರಕ್ರಿಯೆಯನ್ನು ಗೌರವಿಸುತ್ತೇನೆ, ನಿನ್ನೆ ನನಗೆ ಬಹಳ ತಡವಾಗಿ ನೋಟಿಸ್ ಸಿಕ್ಕಿತು, ಹೀಗಾಗಿ ಇಂದು ವಿಚಾರಣೆಗೆ ಹಾಜರಾಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.