ಶ್ರೀನಗರ, ಸೆ 04 (DaijiworldNews/PY): ಸೆ.4ರ ಶುಕ್ರವಾರ ಮುಂಜಾನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪಟ್ಟಾನ್ ಪ್ರದೇಶದ ಯೆಡಿಪೋರಾದಲ್ಲಿ ಉಗ್ರರ ವಿರುದ್ದ ನಡೆದ ಎನ್ಕೌಂಟರ್ನ ವೇಳೆ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ.
ಜಮ್ಮು-ಕಾಶ್ಮೀರ ಪೊಲೀಶರು ಸೇರಿದಂತೆ ರಾಷ್ಟ್ರೀಯ ರೈಫಲ್ಸ್ ಹಾಗೂ ಸಿಆರ್ಪಿಎಫ್ ಸೈನಿಕರು ಶೋಧ ಕಾರ್ಯಾಚರಣೆ ಮಾಡುತ್ತಿದ್ದ ಈ ವೇಳೆ ಉಗ್ರರು ದಾಳಿ ನಡೆಸಿದ್ದು, ರಾಷ್ಟ್ರೀಯ ರೈಫಲ್ಸ್ ನ ಮೇಜರ್ ಓರ್ವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಘಟನೆಯ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪಟ್ಟಾನ್ ಪ್ರದೇಶದ ಯೆಡಿಪೋರಾದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದ್ದು, ಪೊಲೀಸರು ಸೇರಿದಂತೆ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.