ಜೈಪುರ, ಸೆ 04 (DaijiworldNews/PY): ರಾಜಸ್ಥಾನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ನಿನ್ನೆ ಮನೆಗೆ ವಾಪಾಸ್ಸಾದ ಬಳಿಕ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ನನಗೆ ರೋಗಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಬಂದಿದೆ. ಹಾಗಾಗಿ ನಾನು ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇನೆ. ಈ ಹಿಂದೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಸೆ.2ರಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಅವರಿಗೂ ಕೂಡಾ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.