ಚಿಕ್ಕಮಗಳೂರು, ಸೆ 04 (DaijiworldNews/PY): ಡ್ರಗ್ ದಂಧೆಯ ವಿಚಾರವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ನಡುವೆ ತನಿಖಾ ತಂಡದ ಮೇಲೆ ಒತ್ತಡ ಹೇರುವಂತ ಯತ್ನಗಳಾಗುತ್ತಿವೆ. ಈ ರೀತಿಯಾದ ಯಾವುದೇ ಒತ್ತಡಕ್ಕೆ ಸರ್ಕಾರ ಜಗ್ಗಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ ಮಾಫಿಯಾ ತನಿಖೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಕೈಗೊಂಡಿದ್ದೇವೆ. ಇದರಿಂದ ಯುವಜನರನ್ನು ರಕ್ಷಿಸುವ ಜವಾಬ್ದಾರಿ ಸರ್ಕಾರಕ್ಕಿದೆ. ಡ್ರಗ್ ದಂಧೆಯು ಹೊರ ರಾಜ್ಯ ಸೇರಿದಂತೆ ವಿದೇಶಗಳ ನಂಟು ಹೊಂದಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ವೇಳೆ ದಸರಾ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸಿಎಂ ಅವರ ನೇತೃತ್ವದಲ್ಲಿ ಸೆ.8ರಂದು ಉನ್ನತಮಟ್ಟದ ಸಭೆ ನಡೆಯಲಿದ್ದು, ಈ ಬಗ್ಗೆ ಚರ್ಚೆ ನಡೆಸಲಾಗುವುದು. ಈಗಾಗಲೇ ಸಂಪ್ರದಾಯದೊಂದಿಗೆ ದಸರಾ ಹಬ್ಬವನ್ನು ಸರಳವಾಗಿ ಆಚರಣೆ ಮಾಡಬೇಕು ಎಂದು ಚರ್ಚೆ ಮಾಡಲಾಗಿದ್ದು, ಉನ್ನತಮಟ್ಟದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.