ಕಾಶ್ಮೀರ, ಸೆ.05(DaijiworldNews/HR): ಪಾಕಿಸ್ತಾನದ ಪಡೆಗಳು ಕದನವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಇಂದು ಬೆಳಿಗ್ಗೆ 9: 15 ರ ಸುಮಾರಿಗೆ ಕದನ ವಿರಾಮ ಉಲ್ಲಂಘನೆ ಮಾಡಿ, ಪಾಕಿಸ್ತಾನ ಪಡೆ ಪೂಂಚ್ ಜಿಲ್ಲೆಯ ಶಹಪುರ್, ಕಿರ್ನಿ ಮತ್ತು ದೇಗ್ವಾರ್ ವಲಯಗಳಲ್ಲಿ ಗುಂಡಿನ ದಾಳಿ ನಡೆಸಿದೆ.
ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪ್ರತಿ ದಾಳಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ.