ಯಲ್ಲಾಪುರ, ಸೆ 05 (DaijiworldNews/PY): ಕಾರ್ಮಿಕ ಹಾಗೂ ಸಕ್ಕರೆ ಖಾತೆ ಸಚಿವರಾದ ಶಿವರಾಮ್ ಹೆಬ್ಬಾರ್ ಹಾಗೂ ಅವರ ಧರ್ಮ ಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಅವರು, ಇಂದು ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಎಂದು ಬಂದಿದೆ. ಯಾವುದೇ ಹೆಚ್ಚಿನ ರೋಗಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ನಲ್ಲಿದ್ದುಚಿಕಿತ್ಸೆ ತೆಗೆದುಕೊಳ್ಳಲಿದ್ದೇನೆ ಎಂದಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖವಾಗಿ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.