ಬೆಂಗಳೂರು,ಸೆ 6(DaijiworldNews/HR): ಕೊರೊನಾ ಸಂಕಷ್ಟದಲ್ಲಿ ಶಾಲಾ ಕಾಲೇಜುಗಳ ತೆರಿಗೆಯನ್ನು ಮನ್ನಾ ಮಾಡಬೇಕು ಆ ಮೂಲಕ ವಿದ್ಯಾರ್ಥಿಗಳ ಪೋಷಕರಿಂದ ವಸೂಲಿ ಮಾಡುವ ಶುಲ್ಕವನ್ನು ಕಡಿಮೆ ಮಾಡಲು ಸೂಚಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಜಂಟಿ ಪತ್ರಿಕಾಗೋಷ್ಟಲ್ಲಿ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಶೇಖರ್, ಜಿ.ಕೃಷ್ಣಪ್ಪ, ರಾಜ್ಯ ದಲ್ಲಿ ಶಿಕ್ಷಣ ವ್ಯವಸ್ಥೆ ಹಳ್ಳ ಹಿಡಿದಿದೆ. ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಯಾವುದೇ ಯೋಜನೆ ರೂಪಿಸಿಲ್ಲ ಎಂಬುದಾಗಿ ಅಸಮದಾನ ವ್ಯಕ್ತಪಡಿಸಿದ್ದಾರೆ.
ಇನ್ನು ಮಧ್ಯಾಹ್ನದ ಬಿಸಿಯೂಟವನ್ನು ವಿದ್ಯಾರ್ಥಿಗಳ ಮನೆಗೆ ನೇರವಾಗಿ ತಲುಪಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ನಡೆಸಿ ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಪುನಃ ಕರೆತರಬೇಕು. ಶಿಕ್ಷಣ
ಕ್ಷೇತ್ರದಲ್ಲಿ ಪ್ರತ್ಯೇಕ್ಷ ಮತ್ತು ಪರೋಕ್ಷವಾಗಿ ಉದ್ಯೋಗದಲ್ಲಿ ಇರುವವರಿಗೆ ಪರಿಹಾರ ನೀಡಲು ಪ್ಯಾಕೇಜ್ ಘೋಷಣೆ ಮಾಡಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ.