ನವದೆಹಲಿ, ಸೆ 06 (DaijiworldNews/PY): ಹರಿಯಾಣದ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾಗೆ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಉಳಿದ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ಕ್ವಾರಂಟೈನ್ ಆಗಿ ಹಾಗೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.