ಉತ್ತರಪ್ರದೇಶ, ಸೆ 06 (DaijiworldNews/PY): ಉತ್ತರ ಪ್ರದೇಶದ ಮಾಜಿ ಶಾಸಕರೊಬ್ಬರನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಲಖೀಂಪುರ ಕೇರಿಯಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಮಾಜಿ ಶಾಸಕ ನಿರ್ವೇಂದ್ರ ಕುಮಾರ್ ಎನ್ನಲಾಗಿದೆ.
ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಸಣ್ಣ-ಪುಟ್ಟ ಮಾತಿನ ಚಕಮಕಿ ನಡೆದಿದೆ, ಈ ವೇಳೆ ಪರಿಸ್ಥಿತಿ ಉಲ್ಬಣಗೊಂಡಿದ್ದು, ಮಾಜಿ ಶಾಸಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಗಂಭೀರ ಗಾಯಗೊಂಡಿದ್ದ ನಿವೇಂದ್ರ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ವರದಿಯ ಪ್ರಕಾರ, ಭೂಮಿಯನ್ನು ಬಲವಂತವಾಗಿ ಆಕ್ರಮಿಸಲು ಬಂದವರನ್ನು ನಿರ್ವೇಂದ್ರ ಕುಮಾರ್ ತಡೆದಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರಿಗೆ ಕೋಲಿನಿಂದ ಹೊಡೆದಿದ್ದಾರೆ. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಅಲ್ಲದೇ, ನಿವೇಂದ್ರ ಕುಮಾರ್ ಅವರ ಮಹನಿಗೂ ಕೂಡಾ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿರ್ವೇಂದ್ರ ಕುಮಾರ್ ಅವರು 1989,1991ರಲ್ಲಿ ಹಾಗೂ 1993ರಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದು, ನಿಘಾಸನ್ ಅಸೆಂಬ್ಲಿಯಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.