ನವದೆಹಲಿ, ಸೆ 07 (DaijiworldNews/PY): ಕೊರೊನಾ ಸಂದರ್ಭ ಹಿರಿಯ ನಾಗರಿಕರಿಗೆ ಸಮರ್ಪಕ ಸೌಲಭ್ಯಗಳನ್ನು ಒದಗಿಸಲು ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ವಿಸ್ತೃತ ವರದಿ ಸಲ್ಲಿಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ನಿದೇರ್ಶನ ನೀಡಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸುಪ್ರೀಂ ಕೋರ್ಟ್ನ ನ್ಯಾಯಪೀಠವು, ಈ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದೆ.
ಈ ವಿಚಾರದಲ್ಲಿ ರಾಜ್ಯಗಳು ವರದಿಗಳನ್ನು ಮಾತ್ರ ಸಲ್ಲಿಸಿವೆ. ಈ ವರದಿಗಳು ಸಾಕಾಗುವುದಿಲ್ಲ. ಕೊರೊನಾ ಸಾಂಕ್ರಾಮಿಕ ಸಂದರ್ಭ, ಹಿರಿಯಾ ನಾಗರಿಕರ ಕಲ್ಯಾಣಕ್ಕಾಗಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹಾಗೂ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಬೇಕು ಎಂದು ಅರ್ಜಿದಾರ, ಹಿರಿಯ ವಕೀಲ ಅಶ್ವಿನ್ ಕುಮಾರ್ ಹೇಳಿದ್ದಾರೆ.