ಬೀದರ್, ಸೆ 07 (DaijiworldNews/PY): ಕೇಂದ್ರ ಸರ್ಕಾರ ಅನುದಾನ ಹಂಚಿಕೆ ವಿಚಾರದಲ್ಲಿ ಮಾಡುತ್ತಿರುವ ತಾರತಮ್ಯದ ಬಗ್ಗೆ ಕೇಳಲು ಧೈರ್ಯವಿಲ್ಲದ ರಾಜ್ಯದ ಬಿಜೆಪಿ ಸಂಸದರು ಪುಕ್ಕಲರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ವ್ಯಂಗ್ಯವಾಡಿದ್ದಾರೆ.
ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್ಟಿ ಹಣ ನಮ್ಮ ಹಕ್ಕಾಗಿದ್ದು, ಇದು ಯಾರ ಭಿಕ್ಷೆಯೂ ಅಲ್ಲ. ಆದರೆ, ಈ ವಿಚಾರದಲ್ಲಿ ಕೇಂದ್ರ ಧೋರಣೆ ಮಾಡುತ್ತಿದೆ ಎಂದಿದ್ದಾರೆ.
ಕೊರೊನಾ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅವರು, ಕೊರೊನಾ ನಿಯಂತ್ರಣ ಮಾಡಿದ್ದೇವೆ ಎಂದು ಬಿಜೆಪಿ ಸರ್ಕಾರ ತನ್ನ ಕಾರ್ಯವನ್ನು ತಾನೇ ಹೊಗಳಿಕೊಳ್ಳುತ್ತಿದೆ. ಆದರೆ, ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಹೀಗಾಗಲಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈಗಾಲೇ ದೇಶ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಎರಡನೇ ಸ್ಥಾನಕ್ಕೇರಿದೆ ಎಂದು ತಿಳಿಸಿದ್ದಾರೆ.
ದೇಶದ ಆರ್ಥಿಕತೆ ಕುಗ್ಗಿ ಹೋಗಿದೆ. ಇದಕ್ಕೆ ಅಸಮರ್ಥ ಆಡಳಿತ ಹಾಗೂ ತಪ್ಪು ನೀತಿಗಳೆ ಕಾರಣ. ಸರ್ಕಾರವು ಜನರ ಸಂಕಷ್ಟಕ್ಕೆ ಸೂಕ್ತವಾಗಿ ಸ್ಪಂದನೆ ನೀಡುತ್ತಿಲ್ಲ. ಹಾಗಾಗಿ ದಿವಾಳಿಯ ಅಂಚಿನಲ್ಲಿದೆ ಎಂದು ಹೇಳಿದ್ದಾರೆ.