ಬೆಂಗಳೂರು, ಸೆ. 8(DaijiworldNews/HR): ರಾಜ್ಯದ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ಈ ಸಂಬಂಧ ದೆಹಲಿಗೆ ಹೋಗಲುಯಾವುದೇ ದಿನಾಂಕವೂ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಜಾಲ ಭೇದಿಸಲು ಶಕ್ತಿಮೀರಿ ಪ್ರಯತ್ನಿಸಲಾಗುತ್ತಿದೆ, ಈ ದಂಧೆಯ ಹಿಂದೆ ಪ್ರತಿಷ್ಠಿತರು ಯಾರೇ ಇರಲಿ, ಬಿಗಿ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಒತ್ತಡಕ್ಕೆ ಮಣಿಯದೆ, ಪಿಡುಗು ಹತ್ತಿಕ್ಕುವುದಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಹೇಳಿದರು.
ಇನ್ನುಅನೇಕ ಬಿಜೆಪಿ ನಾಯಕರು ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿದ್ದು, ಮತ್ತೊಮ್ಮೆ ನಿರಾಸೆಯಾಗಿದೆ. ಕೋವಿಡ್ ಕಾರಣದಿಂದ ಹಿಂದೊಮ್ಮೆ ವಿಸ್ತರಣೆ ಮುಂದೂಡಿಕೆಯಾಗಿತ್ತು.