ಮುಂಬೈ, ಸೆ 09 (DaijiworldNews/PY): ನಟ ಸುಶಾಂತ್ ಸಿಂಗ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾದಕ ವಸ್ತು ನಂಟು ವಿಚಾರದಲ್ಲಿ ತನಿಖೆ ನಡೆಸುತ್ತಿದ್ದ ಎನ್ಸಿಬಿ ಅಧಿಕಾರಿಗಳು ಸುಶಾಂತ್ ಮಾಜಿ ಪ್ರೇಯಸಿ, ನಟಿ ರಿಯಾ ಚಕ್ರವರ್ತಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವಕೀಲ ಸತೀಶ್ ಮನೇಶಿಂದೆ ತಿಳಿಸಿದ್ದಾರೆ.
ರಿಯಾ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ್ದ ಎನ್ಸಿಬಿ ಮಂಗಳವಾರ ಬಂಧಿಸಿತ್ತು. ಬಳಿಕ ಆರೋಪಿಯ ರಿಯಾರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್ಗೆ ಹಾಜರುಪಡಿಸಲಾಯಿತು. ನಂತರ ಕೋರ್ಟ್ ಆರೋಪಿಯನ್ನು ಕೋರ್ಟ್ ವಿಚಾರಣೆ ನಡೆಸಿದ್ದು, ಸೆ.22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಸುಶಾಂತ್ ಸಿಂಗ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾದಕ ವಸ್ತು ನಂಟು ವಿಚಾರದಲ್ಲಿ ಈಗಾಗಲೇ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ಹೌಸ್ ಮ್ಯಾನೇಜರ್ ಸ್ಯಾಮ್ಯಯೆಲ್ ಮಿರಾಂಡ ಮತ್ತು ಆತನ ಸಿಬ್ಬಂದಿ ದೀಪೇಶ್ ಸಾವಂತ್ರನ್ನು ಮಂಗಳವಾರ ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ರಿಯಾ ಜಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಇನ್ನು ಇಂದು ಬೆಳಗ್ಗೆ 10 ಗಂಟೆಗೆ ರಿಯಾಳನ್ನು ಮುಂಬೈ ಬೈಕುಲ್ಲಾ ಜೈಲಿಗೆ ಸ್ಥಳಾಂತರಿಸಲಾಗುತ್ತದೆ ಎಂದು ತಿಳಿದುಬಂದಿದೆ.