ಬೆಂಗಳೂರು, ಸೆ.9(DaijiworldNews/HR): ಕೊರೊನಾ ಪಿಡುಗು ನಿಯಂತ್ರಿಸಲು ನೆರವಾಗುವ ಹಾಗೂ ಸೋಂಕು ಸಂಕಷ್ಟದ ಸಂದರ್ಭದಲ್ಲಿ ಕರ್ನಾಟಕದ ಅನ್ವೇಷಣಾ ಸಾಮರ್ಥ್ಯ ಪ್ರತಿಬಿಂಬಿಸುವ 22 ಉತ್ಪನ್ನಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಲೋಕಾರ್ಪಣೆಗೊಳಿಸಿದರು.
ಇಲಾಖೆಯ ಕರ್ನಾಟಕ ಅವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆಯ ಆಶ್ರಯದಲ್ಲಿ ಬೆಂಗಳೂರು ಬಯೋ ಇನ್ನೊವೇಷನ್ ಸೆಂಟರ್ ಮೇಲ್ವಿಚಾರಣೆಯಡಿ 6 ಉತ್ಪನ್ನಗಳು ಅಭಿವೃದ್ಧಿಗೊಂಡಿದ್ದರೆ, ಕೆಐಟಿಎಸ್ ನ ಕರ್ನಾಟಕ ನವೋದ್ಯಮ ಕೋಶದ ಮೇಲ್ವಿಚಾರಣೆಯಡಿ 16 ಉತ್ಪನ್ನಗಳು ಅಭಿವೃದ್ಧಿಗೊಂಡಿವೆ.
ಈ ಬಗ್ಗೆ ಮಾತನಾಡಿದ ಡಿಸಿಎಂ ಈ ಉತ್ಪನ್ನಗಳು ಬೆಂಗಳೂರಿನ ಮತ್ತು ಕರ್ನಾಟಕದ ಅನ್ವೇಷಣಾ ಸಾಮರ್ಥ್ಯವನ್ನು ಮತ್ತೊಮ್ಮೆ ಎತ್ತಿತೋರಿಸಿವೆ. ಈ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ ನವೋದ್ಯಮಗಳನ್ನು ಅಭಿನಂದಿಸಿದರು.