ಹೈದರಾಬಾದ್, ಸೆ. 09 (DaijiworldNews/MB) : ತೆಲುಗಿನ ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಅವರು ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ನಿಗೂಢವಾಗಿದೆ.
ಹೈದರಾಬಾದ್ನ ಮಧುರನಗರದಲ್ಲಿರುವ ತನ್ನ ನಿವಾಸದ ಬಾತ್ರೂಂನ ಸೀಲಿಂಗ್ನಲ್ಲಿ ನಟಿ ಶ್ರಾವಣಿ ಕೊಂಡಪಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನು ಈ ನಡುವೆ ಗೆಳೆಯ ದೇವರಾಜ್ ರೆಡ್ಡಿ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶ್ರಾವಣಿಯ ಕುಟುಂಬ ಆರೋಪಿಸಿದೆ.
ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಒಸ್ಮಾನಿಯಾ ಆಸ್ಪತ್ರೆಗೆ ಸಾಗಿಸಿದ್ದು ಆಂಧ್ರಪ್ರದೇಶದ ಕಾಕಿನಾಡ ಮೂಲದ ದೇವರಾಜ್ ವಿರುದ್ಧ ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗು ಕಿರುತೆರೆ ನಟಿಯಾಗಿದ್ದು ಜನಪ್ರಿಯ ತೆಲುಗು ಧಾರಾವಾಹಿಗಳಾದ ಮನಸು ಮಮಥಾ ಮತ್ತು ಮೌನರಾಗಂನಲ್ಲಿ ಕಾಣಿಸಿಕೊಂಡಿದ್ದಾರೆ.