ಕೋಲ್ಕತ್ತ, ಸೆ. 10 (DaijiworldNews/MB) : ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರವು ಹಿಂದೂ ವಿರೋಧಿ ಧೋರಣೆಯನ್ನು ಹೊಂದಿದ್ದು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಆರೋಪಿಸಿದ್ದಾರೆ.
ಬಿಜೆಪಿಯ ರಾಜ್ಯ ಸಮಿತಿಯನ್ನು ಹೊಸದಾಗಿ ರಚಿಸಿದ ಸಂದರ್ಭ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಸರ್ಕಾರ ಹಿಂದೂ ವಿರೋಧಿ ಧೋರಣೆಯನ್ನು ಹೊಂದಿದ್ದು ಅಲ್ಪಸಂಖ್ಯಾತರನ್ನು ಓಲೈಕೆಗೆ ಬೇಕಾದಂತಹ ನೀತಿಗಳನ್ನು ಜಾರಿಗೆ ತರುತ್ತಿದೆ. ಅಷ್ಟೇ ಅಲ್ಲದೆ ಭ್ರಷ್ಟಾಚಾರದ ಅಭಿವೃದ್ದಿಯಲ್ಲಿ ಸರ್ಕಾರ ತೊಡಗಿದೆ ಎಂದು ಆರೋಪಿಸಿದರು.
ಇನ್ನು ಪಶ್ಚಿಮ ಬಂಗಾಳದ ಜನರು ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆಯಲ್ಲಿ ಭಾಗವಹಿಸುವುದನ್ನು ತಡೆಯಲು ಆಗಸ್ಟ್ ಆ.5 ರಂದು ರಾಜ್ಯದಲ್ಲಿ ಲಾಕ್ಡೌನ್ ಮಾಡಿದ್ದರು. ಆದರೆ ಬಕ್ರೀದ್ ಸಂದರ್ಭದಲ್ಲಿ ಲಾಕ್ಡೌನ್ ಅನ್ನು ಹಿಂಪಡೆದಿದ್ದಾರೆ ಎಂದು ದೂರಿದರು.