ಮಂಡ್ಯ, ಸೆ. 11 (DaijiworldNews/MB) : ಮಂಡ್ಯದ ದೇವಾಲಯವೊಂದರ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ ಎಂದು ವರದಿ ತಿಳಿಸಿದೆ.
ಮೃತ ಅರ್ಚಕರನ್ನು ಗಣೇಶ್ (35), ಪ್ರಕಾಶ್ (36), ಆನಂದ್ (33) ಎಂದು ಗುರುತಿಸಲಾಗಿದೆ.
ಮುಜರಾಯಿ ಇಲಾಖೆಗೆ ಸೇರಿರುವ ಇಲ್ಲಿನ ಅರಕೇಶ್ವರ ದೇವಾಲಯದ ಮೂವರು ಅರ್ಚಕರು ದೇವಾಲಯದ ಪೂಜೆಯೊಂದಿಗೆ ದೇವಾಲಯದ ಕಾವಲು ಕೂಡಾ ಕಾಯುತ್ತಿದ್ದರು. ಗುರುವಾರ ರಾತ್ರಿ ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಕಳ್ಳರು, ಹುಂಡಿಯಲ್ಲಿನ ನೋಟುಗಳನ್ನು ಮಾತ್ರ ತೆಗೆದುಕೊಂಡು ಚಿಲ್ಲರೆ ಇರುವ ಹುಂಡಿಯನ್ನು ಆವರಣದಲ್ಲಿ ಎಸೆದು ಹೋಗಿದ್ದಾರೆ.
ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.