ಬೆಂಗಳೂರು, ಸೆ 11 (DaijiworldNews/PY): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಕಜೀಕ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಸ್ವತಃ ಅವರೇ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.