ಬೆಂಗಳೂರು,ಸೆ.12(DaijiworldNews/HR): ಕೋವಿಡ್ ಸೋಂಕಿನ ಹಿನ್ನೆಲೆ 'ಸಾರ್ವಜನಿಕ ಗ್ರಂಥಾಲಯವನ್ನು ಮುಚ್ಚಲಾಗಿದು, ಇಂದಿನಿಂದ 'ಸಾರ್ವಜನಿಕ ಗ್ರಂಥಾಲಯ' ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ.
ಕೊರೊನಾ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾತ್ರವಲ್ಲದೆ ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ. ಅನ್ ಲಾಕ್ 4 ಮಾರ್ಗಸೂಚಿ ಪ್ರಕಾರ ಕಂಟೈನ್ ಮೆಂಟ್ ಹೊರತುಪಡಿಸಿ ಹೊರಗಿನ ಪ್ರದೇಶಗಳಲ್ಲಿ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ.