ಭೋಪಾಲ್ , ಸೆ.12(DaijiworldNews/HR): ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವಂತೆಯೇ, ಔಷಧಿ ಸಿಗುವವರೆಗೂ ಕೊರೊನಾ ವೈರಸ್ ಕುರಿತು ನಿರ್ಲಕ್ಷ್ಯತನ ಬೇಡ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಧ್ಯಪ್ರದೇಶದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿಯ ಗೃಹಪ್ರವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೋದಿ, ಕೊರೋನಾ ವೈರಸ್ ಸೋಂಕಿಗೆ ಪರಿಣಾಮ ಔಷಧಿ ಸಿಗುವವರೆಗೂ ಜನರು ತಮ್ಮ ಎಚ್ಚರಿಕೆಯಲ್ಲಿ ತಾವಿರಬೇಕು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ. ಔಷಧಿ ಸಿಗುವವರೆಗೂ ನಿರ್ಲಕ್ಷ್ಯತನ ಬೇಡ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆಯನ್ನು ತಪ್ಪದೇ ಪಾಲಿಸಿ ಎಂಬುದಾಗಿ ತಿಳಿಸಿದ್ದಾರೆ.
ಮಧ್ಯ ಪ್ರದೇಶದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 83,619ಸಂಖ್ಯೆಗೆ ಏರಿಕೆಯಾಗಿದ್ದು, ಅಂತೆಯೇ ಈ ವರೆಗೂ 1,691 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.