ಲಖನೌ, ಸೆ 12(DaijiworldNews/PY): ಐಷಾರಾಮಿ ವೆಚ್ಚಗಳನ್ನು ಕಡಿಮೆ ಮಾಡಿ, ಶಾಲಾ-ಕಾಲೇಜು ಶುಲ್ಕವನ್ನು ಮನ್ನಾ ಮಾಡಿ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ವೈರಸ್ ಅನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಾರಿಗೊಳಿಸಿದ ಲಾಕ್ ಡೌನ್ ನಿಂದ ಕೋಟ್ಯಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಅಲ್ಲದೇ, ಇದರಿಂದಾಗಿ ಪೋಷಕರಿಗೆ ಮಕ್ಕಳ ಶಾಲಾ-ಕಾಲೇಜಿನ ಶುಲ್ಕ ಕಟ್ಟಲು ಆಗುತ್ತಿಲ್ಲ. ಈ ಕಾರಣದಿಂದ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ದುರದೃಷ್ಟಕರ ವಿಚಾರ ಎಂದಿದ್ದಾರೆ.
ಕೊರೊನಾದಿಂದಾದ ಸಂಕಷ್ಟವನ್ನು ದೇವರ ಆಟ ಎಂದು ಹೇಳಿರುವ ಕೇಂದ್ರ, ದೇಶ ಅಭಿವೃದ್ಧಿಗಾಗಿ ಕಾಯ೯ನಿವ೯ಹಿಸಬೇಕು. ಈ ಅಲ್ಲದೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಐಷಾರಾಮಿ ವೆಚ್ಚಗಳನ್ನು ಕಡಿಮೆ ಮಾಡಿ, ಶಾಲಾ ಶುಲ್ಕವನ್ನು ಮನ್ನಾ ಮಾಡಿ ಎಂದು ಹೇಳಿದ್ದಾರೆ.