ನವದೆಹಲಿ, ಸೆ. 13 (DaijiworldNews/MB) : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ತಮ್ಮ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ಪುತ್ರ ರಾಹುಲ್ನೊಂದಿಗೆ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಪಕ್ಷದ ಹಿರಿಯ ಮುಖಂಡರುಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸೋನಿಯಾ ಗಾಂಧಿಯವರು ಮುಂಗಾರು ಅಧಿವೇಶನಕ್ಕೆ ಗೈರಾಗುವ ಸಾಧ್ಯತೆಯಿದ್ದು ರಾಹುಲ್ ಮಾತ್ರ ಭಾರತಕ್ಕೆ ವಾಪಾಸ್ ಬಂದು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.