ನವದೆಹಲಿ, ಸೆ. 13 (DaijiworldNews/MB) : ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಆಗಸ್ಟ್ 31 ರಂದು ಏಮ್ಸ್ನಿಂದ ಬಿಡುಗಡೆಯಾಗಿದ್ದ ಕೇಂದ್ರ ಗೃಹ ಅಮಿತ್ ಶಾ ಅವರು ಶನಿವಾರ ರಾತ್ರಿ 11 ಗಂಟೆಗೆ ಮತ್ತೆ ಏಮ್ಸ್ಗೆ ದಾಖಲಾಗಿದ್ದಾರೆ.
ಅಮಿತ್ ಶಾ ಅವರಿಗೆ ಆಗಸ್ಟ್ 2ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆಗಸ್ಟ್ 14ರಂದು ಕೊರೊನಾ ವರದಿ ನೆಗೆಟಿವ್ ಬಂದ ಹಿನ್ನೆಲೆ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಅಮಿತ್ ಶಾ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದ್ದು ಈ ಹಿನ್ನೆಲೆ ಅವರ ಮೇಲೆ ನಿಗಾ ಇರಿಸಲು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.