ಜಮ್ಮು, ಸೆ 13(DaijiworldNews/PY): ಪಾಕ್ ಸೈನ್ಯ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಜಮು-ಕಾಶ್ಮೀರದ ಪೂಂಚ್ ಸೆಕ್ಟರ್ ನ ಎಲ್ಒಸಿಯಲ್ಲಿ ಶೆಲ್ ದಾಳಿ ನಡೆಸಿದೆ.
ಈ ವಿಚಾರವಾಗಿ ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದು, ಪಾಕಿಸ್ತಾನ ಸೈನ್ಯವು ಕದನ ವಿರಾಮ ಉಲ್ಲಂಘನೆ ಮಾಡಿದೆ. ಅಲ್ಲದೇ ಅಪ್ರಚೋದಿತ ಗು೦ಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.
ಇದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ಮಾನ್ಕೋಟ್ ಹಾಗೂ ಗುಲ್ಪುರ್ ಸೆಕ್ಟರ್ ನಲ್ಲಿ ಎರಡು ಕಡೆಯಿ೦ದ ಫೈರಿಂಗ್ ನಡೆದಿದೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಿದ್ದಾರೆ.