ರಾಯಚೂರು, ಸೆ.13(DaijiworldNews/HR): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅಶೋಕ್ ಅವರಿಗೆ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ 19 ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಅಶೋಕ್ ಗಸ್ತಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಸೆ. 14 ರಿಂದ ಆರಂಭವಾಗುವ ಸಂಸತ್ ನ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎನ್ನಲಾಗಿದೆ.