ಬೆಂಗಳೂರು, ಸೆ.14(DaijiworldNews/HR): ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ನಟಿ ರಾಗಿಣಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು, ಎನ್ ಡಿ ಪಿ ಎಸ್ ನ್ಯಾಯಾಲಯದಲ್ಲಿ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದ್ರೇ ವಿಚಾರಣೆಯನ್ನು ಬಾಕಿ ಉಳಿಸಿ, ಸೆಪ್ಟೆಂಬರ್ 16ಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.
ಹೀಗಾಗಿ ರಾಗಿಣಿಗೆ ಇನ್ನೂ ಎರಡು ದಿನ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ.
ಇನ್ನು ಕೋರ್ಟ್ ಕಲಾಪಕ್ಕೂ ಮುನ್ನ ರಾಗಿಣಿ ಹಾಗೂ ಸಂಜನಾರನ್ನು ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಕರೊನಾ ಪರೀಕ್ಷೆ ಕೂಡ ಮಾಡಿಸಲಾಯಿತು. ಇಬ್ಬರಿಗೂ ನೆಗೆಟಿವ್ ಬಂದಿದೆ ಎಂದು ಮೂಲಗಳು ಹೇಳಿವೆ.