ಬೆಂಗಳೂರು, ಸೆ.14(DaijiworldNews/HR): ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.
ಮತ್ತೆ 3 ದಿನಗಳ ವಿಚಾರಣೆಗಾಗಿ ಸಂಜನಾ ಗಲ್ರಾನಿ ಅವರನ್ನು ಸಿಸಿಬಿ ವಶಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಇನ್ನು ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿ ನಟಿಯನ್ನು ಐದು ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಸಿಸಿಬಿ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದರು. ಆದರೆ ಕೋರ್ಟ್ ಸೆಪ್ಟೆಂಬರ್ 16ರ ವರೆಗೆ ಮಾತ್ರ ಸಿಸಿಬಿ ವಿಶಕ್ಕೆ ನೀಡಿದೆ.