ನವದೆಹಲಿ, ಸೆ.15(DaijiworldNews/HR): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೂ ಸೋಂಕು ದೃಢಪಟ್ಟಿದೆ.
ಸಿಸೋಡಿಯಾಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಕಾರಣದಿಂದ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ಅವರ ವರದಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ 'ನಾನು ಐಸೋಲೇಷನ್ನಲ್ಲಿದ್ದು, ಸದ್ಯಕ್ಕೆ ನನಗೆ ಲ್ಲ. ಸಂಪೂರ್ಣವಾಗಿ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ, ಆರೋಗ್ಯವಾಗಿದ್ದೇನೆ. ನಿಮ್ಮ ಆಶೀರ್ವಾದದೊಂದಿಗೆ ನಾನು ಆದಷ್ಟು ಬೇಗ ಕೆಲಸಕ್ಕೆ ಮರಳುತ್ತೇನೆ' ಎಂದು ತಿಳಿಸಿದ್ದಾರೆ.
ಇನ್ನು ಸಿಸೋಡಿಯಾಗೆ ಜ್ವರದ ಲಕ್ಷಣಗಳಿದ್ದ ಕಾರಣ ಅವರು ವಿಧಾನಸಭೆಯಲ್ಲಿ ಪಾಲ್ಗೊಳ್ಳವುದು ಬೇಡ ಎಂದು ದೆಹಲಿ ಸ್ಪೀಕರ್ ರಾಮ್ ಗೋಯಲ್ ಸೂಚಿಸಿದ್ದರು. ಇದಾದ ನಂತರ ಅವರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ಐಸೋಲೇಷನ್ಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.