ವಾಷಿಂಗ್ಟನ್ , ಸೆ.15(DaijiworldNews/HR): ಭಾರತ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಾದ ಮಹಿಳೆಯರ ಸ್ಥಿತಿಗತಿ ಆಯೋಗದ ಸದಸ್ಯ ರಾಷ್ಟ್ರವಾಗಿ ಆಯ್ಕೆಯಾಗಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ತಿರುಮೂರ್ತಿ, ಭಾರತ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ಮಹಿಳೆಯರ ಸ್ಥಿತಿಗತಿ ಆಯೋಗದ ಸದಸ್ಯ ರಾಷ್ಟ್ರವಾಗಿ ಆಯ್ಕೆಯಾಗಿದೆ. ಎಲ್ಲಾ ಸದಸ್ಯ ರಾಷ್ಟ್ರಗಳ ಬೆಂಬಲಕ್ಕಾಗಿ ನಾವು ಧನ್ಯವಾದ ತಿಳಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಆಯೋಗದ ಸದಸ್ಯತ್ವಕ್ಕಾಗಿ ಭಾರತ, ಅಪ್ಘಾನಿಸ್ತಾನ ಮತ್ತು ಚೀನಾ ರಾಷ್ಟ್ರಗಳು ಸ್ಪರ್ಧಿಸಿದ್ದವು. 54 ಸದಸ್ಯ ರಾಷ್ಟ್ರಗಳು ಮತ ಚಲಾಯಿಸಿದ್ದವು. ಕೊನೆಗೆ ಭಾರತ ಗೆಲ್ಲುವ ಮೂಲಕ ಭಾರತ ಮುಂದಿನ 4 ವರ್ಷಗಳ ಅವಧಿಗೆ ವಿಶ್ವಸಂಸ್ಥೆಯ ಆಯೋಗದ ಸದಸ್ಯ ರಾಷ್ಟ್ರವಾಗಿ ಮುಂದುವರೆಯಲಿದೆ.