ಬೆಂಗಳೂರು, ಸೆ 15 (DaijiworldNews/PY): ಸ್ಯಾಂಡಲ್ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಮಾಜಿ ಸಚಿವ ಜೀವರಾಜ್ ಆಳ್ವ ಹಾಗೂ ನಂದಿನಿ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಅವರ ನಿವಾಸದ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ನಗರದ ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ನಿನ್ನೆ ಕೋರ್ಟ್ನಿಂದ ಸಿಸಿಬಿ ಪೊಲೀಸರು ಸರ್ಚ್ ವಾರಂಟ್ ಪಡೆದಿದ್ದು, ಇಂದು ಬೆಳ್ಳಂಬೆಳಗ್ಗೆ ಆದಿತ್ಯ ಆಳ್ವ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ ನಾಯಕ್ ಹಾಗೂ ಪುನೀತ್ ನೇತೃತ್ವದ ತಂಡ ಆದಿತ್ಯ ಆಳ್ವ ನಿವಾಸದ ಮೇಲೆ ದಾಳಿ ನಡೆಸಿದೆ.