ನವದೆಹಲಿ, ಸೆ 15 (DaijiworldNews/PY): ಕೇಂದ್ರ ಸರ್ಕಾರವು, ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ ಮಾದರಿಯ ಈರುಳ್ಳಿಯ ರಫ್ತು ನಿಷೇಧಕ್ಕೆ ಆದೇಶ ನೀಡಿದೆ.
ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈರುಳ್ಳಿ ರಫ್ತಿಗೆ ನಿಷೇಧ ಹೇರಿದ್ದು, ಶೀಘ್ರವೇ ಇದು ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ದಿನೇ ದಿನೇ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದ್ದು, ಈ ಕಾರಣದಿಂದಿ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಈರುಳ್ಳಿ ಪ್ರತಿ ಕೆ.ಜಿಗೆ ರೂ.40 ರಂತೆ ಮಾರಾಟವಾಗುತ್ತಿದೆ. ಇನ್ನೊಂದೆಡೆ ದೇಶದ ಇತರೆ ಭಾಗಗಳ ಹಲವು ನಗರಗಳಲ್ಲಿ ಈರುಳ್ಳಿ ಪ್ರತಿ ಕೆ.ಜಿ.ಗೆ 50 ರೂ. ನಂತೆ ಮಾರಾಟವಾಗುತ್ತಿದೆ.
ಇನ್ನು ಭಾರತ ಬಾಂಗ್ಲಾದೇಶ, ಮಲೇಷಿಯಾ, ಯುಎಇ ಹಾಗೂ ಶ್ರೀಲಂಕಾ ರಾಷ್ಟ್ರಗಳಿಗೆ ಈರುಳ್ಳಿ ರಫ್ತು ಮಾಡಲಾಗುತ್ತಿದೆ. ಭಾರತ ಬಾಂಗ್ಲಾದೇಶಕ್ಕೆ ಕಳೆದ ವರ್ಷ ಸಪ್ಟೆಂಬರ್ನಲ್ಲಿ ಈರುಳ್ಳಿ ರಫ್ತು ಮಾಡುವುದನ್ನು ನಿಲ್ಲಿಸಿತ್ತು. ಭಾರತವು ಕಳೆದ ಎಪ್ರಿಲ್-ಜೂನ್ ತಿಂಗಳಿನಲ್ಲಿ 19.8 ಕೋಟಿ ಡಾಲರ್ ಮೌಲ್ಯದ ಈರುಳ್ಳಿಯನ್ನು ರಫ್ತು ಮಾಡಿತ್ತು.