ಶ್ರೀನಗರ, ಸೆ.15(DaijiworldNews/HR): ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ನಡೆದಿದೆ.
ಖಚಿತ ಮಾಹಿತಿ ಮೆರೆಗೆ ಪುಲ್ವಾಮಾದ ಮಾರ್ವಲಾ ಪ್ರಾಂತ್ಯದಲ್ಲಿ ಉಗ್ರರು ಅಡಗಿರುವ ತೆರಳಿದ ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತ್ಯುತ್ತರವಾಗಿ ಸೇನೆಯು ಕೂಡ ಗುಂಡಿನ ಸುರಿಮಳೆಗೈದಿದೆ.
ಪೊಲೀಸರು ಹಾಗೂ ಸಿಆರ್ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಪುಲ್ವಾಮಾದಲ್ಲಿ ಮತ್ತೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ಏರ್ಪಟ್ಟಿದ್ದು, ಕಾರ್ಯಾಚಾರಣೆ ಇನ್ನೂ ಪ್ರಗತಿಯಲ್ಲಿದೆ. ಈ ವೇಳೆ ಇಬ್ಬರು ಯೋಧರಿಗೆ ತೀವ್ರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಪುಲ್ವಾಮಾ ಜಿಲ್ಲೆಯ ಕಾಕಪುರ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ ಈ ಪ್ರದೇಶದಲ್ಲಿ ಮೂವರು ಉಗ್ರರು ಸಿಲುಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಂಡಿನ ದಾಳಿ ಮುದುವರೆದಿದ್ದು, ಘಟನೆಯ ಬಗ್ಗೆ ಇನ್ನೂ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.