ಹಾಸನ, ಸೆ 16 (DaijiworldNews/PY): ಆಹಾರ ಹಾಗೂ ನಾಗರೀಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರಿಗೆ ಕೊರೊನಾ ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿದ ಅವರು, ನನಗೆ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಇಂದು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.