ಬೆಂಗಳೂರು, ಸೆ. 16 (DaijiworldNews/MB) : ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಅವರು ಟ್ವೀಟ್ ಮೂಲಕ ತಿಳಿಸಿದ್ದು, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಕೂಡಾ ಹೇಳಿದ್ದಾರೆ.