ಬೆಂಗಳೂರು, ಸೆ. 16 (DaijiworldNews/MB) : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲಲ್ಲಿ ಇರುವ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದ್ದು ನಟಿ ರಾಗಿಣಿ ಇನ್ನೂ ಮೂರು ದಿನ ಜೈಲಲ್ಲೇ ಉಳಿಯುವಂತಾಗಿದೆ.
ನಟಿ ರಾಗಿಣಿ ದ್ವಿವೇದಿ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಬುಧವಾರ ನ್ಯಾಯಾಲಯದ ಮುಂದೆ ನಟಿ ರಾಗಿಣಿ ಜಾಮೀನು ಅರ್ಜಿ ಬಂದಿದ್ದು ತನಿಖೆ ಪ್ರಗತಿಯಲ್ಲಿದ್ದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಸಿಸಿಬಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ ಎನ್ನಲಾಗಿದೆ.
ಇನ್ನು ನಟಿ ಸಂಜನಾ ಗಲ್ರಾನಿ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆ ಸಂಜನಾರನ್ನು ಪೋಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.
ಸಿಸಿಬಿ ನೀಡಿದ ನೋಟಿಸ್ನಂತೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೆ ದಂಪತಿಗಳು ಕೂಡಾ ಬುಧವಾರ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.