ಬೆಂಗಳೂರು, ಸೆ 16 (DaijiworldNews/PY): ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ವಿಚಾರಣೆಗೆ ಹಾಜರಾಗಿದ್ದು, ಸಿಸಿಬಿ ಅಧಿಕಾರಿಗಳು ಕೇಳಿದ್ದ ಪ್ರಶ್ನೆ ಉತ್ತರ ನೀಡಿದ್ದು, ಮೊದಲ ಹಂತದ ವಿಚಾರಣೆ ಮುಕ್ತಾಯಗೊಂಡಿದೆ.
ಸಿಸಿಬಿ ಅಧಿಕಾರಿಗಳು ದಂಪತಿಗಳಾದ ದಿಗಂತ್ ಹಾಗೂ ಐಂದ್ರಿತಾ ರೇ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಮಾಹಿತಿ ಕಲೆಹಾಕಿದ್ದು, ಇನ್ನು ಹೆಚ್ಚಿನ ಮಾಹಿತಿಯ ಅಗತ್ಯ ಬೇಕಾದಲ್ಲಿ ಪುನಃ ಸಮನ್ಸ್ ನೀಡಿ ಕರೆಸಿಕೊಳ್ಳತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಸಿಬಿ ದಂಪತಿಗಳಾದ ದಿಗಂತ್ ಹಾಗೂ ಐಂದ್ರಿತಾ ರೇ ಗೆ ನೋಟಿಸ್ ನೀಡಿತ್ತು. ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಇಬ್ಬರೂ ಕೂಡಾ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದು, ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.