ಯಾದಗಿರಿ, ಸೆ. 16 (DaijiworldNews/SM): ಸದ್ಯ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನ ಮುಗಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.
ಗುರುವಾರದಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳುತ್ತಾರೆ. ಆದರೆ, ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದಿಲ್ಲ. ವಿಧಾನಸಭೆ ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಿದ್ದಾರೆ.
ಈ ಹಿಂದೆ ನಿಗಧಿಯಾದಂತೆ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದಾರೆ. ಅತಿವೃಷ್ಟಿ ಪರಿಹಾರ ಪಡೆಯುವ ಬಗ್ಗೆ ಚೆರ್ಚಿಸಲಿದ್ದಾರೆ. ಆದರೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದಿದ್ದಾರೆ. ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಸದ್ಯ ಎರಡನೇ ಕಂತಿನಲ್ಲಿ 395 ಕೋಟಿ ಕೊಟ್ಟಿದ್ದು ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ ಎಂದರು.