ನವದೆಹಲಿ, ಸೆ. 17 (DaijiworldNews/MB) : ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ ನೇಪಾಳ, ಪ್ರಧಾನಿ, ರಷ್ಯಾ ಅಧ್ಯಕ್ಷರು ಸೇರಿದಂತೆ ಹಲವು ದೇಶದ ನಾಯಕರು ಶುಭಾಶಯ ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರಿಗೆ ಶುಭಾಶಯ ಕೋರಿ ಪತ್ರ ಬರೆದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ನೀವು ಪ್ರಧಾನಿಯಾಗಿ ಮಾಡಿದ ಸಾಧನೆ ಅಂತಾರಾಷ್ಟ್ರೀಯ ಮಟ್ಟದ ಗೌರವಕ್ಕೆ ಅರ್ಹವಾಗಿದ್ದು ನಿಮ್ಮ ನಾಯಕತ್ವದಲ್ಲಿ ಭಾರತ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆ ಮಾಡಿದೆ. ನೀವು ಭಾರತ ರಷ್ಯಾದ ನಡುವಿನ ಶತಮಾನಗಳಷ್ಟು ಹಳೆಯದಾದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಮಹತ್ವವಾದ ಶ್ರಮವಹಿಸಿದ್ದೀರಿ. ಅಭಿವೃದ್ದಿ ಹಾಗೂ ಶಾಂತಿ ಸ್ಥಾಪನೆಗಾಗಿ ನಾವು ನಿಮ್ಮೊಂದಿಗೆ ಇದ್ದೇವೆ. ನಿಮ್ಮ ಹುಟ್ಟು ಹಬ್ಬದ ಈ ಸುದಿನ, ನೀವು ಆರೋಗಯವಂತರಾಗಿ ದೀರ್ಘ ಕಾಲ ಬಾಳಿ ಎಂದು ನನ್ನ ಹಾರೈಕೆ ಎಂದು ಹುಟ್ಟು ಹಬ್ಬಕ್ಕೆ ಶುಭಾಷಯ ತಿಳಿಸಿದ್ದಾರೆ.
ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಒಲಿಯವರು ಶುಭಾಶಯ ತಿಳಿಸಿದ್ದು, ಈ ಜನ್ಮದಿನದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಆತ್ಮೀಯ ಶುಭಾಶಯಗಳು. ನಾನು ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ. ನಮ್ಮ ಉಭಯ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸೋಣ ಎಂದು ಹೇಳಿದ್ದಾರೆ.'
ಇನ್ನು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ವಿಪಕ್ಷ ನಾಯಕರು ಸೇರಿದಂತೆ ಹಲವು ಹಿರಿಯ ನಾಯಕರು, ಗಣ್ಯರು ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಈ 70ನೇ ಜನ್ಮ ದಿನವನ್ನು ಬಿಜೆಪಿಯು ಹಲವು ಸೇವಾ ಕಾರ್ಯಗಳೊಂದಿಗೆ ಆಚರಿಸುತ್ತಿದ್ದು ಮೋದಿಯವರ 70ನೇ ಹುಟ್ಟುಹಬ್ಬವಾ ಹಿನ್ನೆಲೆ ಈ ಸೇವಾ ಕಾರ್ಯಕ್ರಮಗಳಿಗೆ ಸೇವಾ ಸಪ್ತಾಹ ಎಂದು ಹೆಸರಿಡಲಾಗಿದೆ.