ನವದೆಹಲಿ, ಸೆ. 17 (DaijiworldNews/MB) : ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ 70 ನೇ ವರ್ಷಕ್ಕೆ ಕಾಲಿಟ್ಟಿದ್ದು ಟ್ವೀಟರ್ನಲ್ಲಿ ಮೋದಿ ಹುಟ್ಟು ಹಬ್ಬದ ಶುಭ ಹಾರೈಕೆಗಳು ಟ್ರೆಂಡ್ ಆಗುತ್ತಿರುವ ನಡುವೆಯೇ #NationalUnemploymentDay ಕೂಡಾ ಟ್ರೆಂಡ್ ಆಗುತ್ತಿದೆ.
ಈ ವಾರವನ್ನು ರಾಷ್ಟ್ರೀಯ ನಿರುದ್ಯೋಗ ಸಪ್ತವಾಗಿ ಆಚರಿಸಲಾಗಿದ್ದು ಇಂದಿಗೆ ಅದು ಕೊನೆಗೊಳ್ಳಲಿದೆ. ಈ ಹಿನ್ನೆಲೆ ಇಂದು ಟ್ವೀಟರ್ನಲ್ಲಿ ರಾಷ್ಟ್ರೀಯ ನಿರುದ್ಯೋಗ ದಿನವು ಟ್ರೆಂಡ್ ಆಗಿದೆ.
ದೇಶದಲ್ಲಿ ತೀವ್ರವಾಗಿ ಕಾಡುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಬೊಟ್ಟು ಮಾಡಿ ತೋರಿಸಿರುವ ಟ್ವೀಟಿಗರು ಪ್ರಧಾನಿ ಮೋದಿಯವರು ಉದ್ಯೋಗ ಸೃಷ್ಟಿಸಲು ವಿಫಲರಾಗಿದ್ದಾರೆ. ಬದಲಾಗಿ ಉದ್ಯೋಗವನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿಯವರು 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದಾರೆ. ಆದರೆ 12 ಕೋಟಿ ಮಂದಿ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಟ್ವೀಟಿಗರು ಜಿಡಿಪಿ ಕುಸಿತವನ್ನು ಕೂಡಾ ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.