ಕಲಬುರಗಿ, ಸೆ 17 (DaijiworldNews/PY): ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ದವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸರ್ಕಾರವು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ದವಾಗಿದೆ ಎಂದರು.
ಕಲಬುರ್ಗಿ, ಬೀದರ್ ಜಿಲ್ಲೆಗೆ 3 ಸಾವಿರ ಕೋಟಿ.ರೂ ವೆಚ್ಚದಲ್ಲಿ ಕೃಷಿ ಹಾಗೂ ಕಾಗಿಣಾ ನದಿಗೆ ಹೊಂದಿಕೊಂಡು ಹತ್ತು ಏತ ನೀರಾವರಿ ಕಾಮಗಾರಿಗೆ ಅನುಮೋದನೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮುಂದಿನ ನಾಲ್ಕು ತಿಂಗಳಿನಲ್ಲಿ ಅನುಭವ ಮಂಟಪದ ಕಾರ್ಯಾರಂಭವಾಗಲಿದ್ದು, ಇದನ್ನು ಬಸವ ಕಲ್ಯಾಣ ಪ್ರಾಧಿಕಾರದ ಆಶ್ರಯದಲ್ಲಿ ಮಾಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ, ಉಪ ಮುಖ್ಯಮಂತ್ರಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಮತ್ತಿತರರು ಉಪಸ್ಥಿತರಿದ್ದರು.