ಬೆಂಗಳೂರು, ಸೆ 17 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.