ದೆಹಲಿ, ಸೆ.(DaijiworldNews/HR): ಕೇಂದ್ರ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಪ್ರದಾನಿ ನರೇಂದ್ರ ಮೋದಿ ಸರ್ಕಾರ ತರುತ್ತಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.
ಆಹಾರ ಸಂಸ್ಕರಣಾ ಕೈಗಾರಿಕೆಗಳ ಹೆಚ್ಚುವರಿ ಉಸ್ತುವಾರಿಯನ್ನು ನರೇಂದ್ರ ಸಿಂಗ್ ತೋಮಾರ್ ಅವರಿಗೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಕ್ಷಣದಿಂದಲೇ ಜಾರಿಗೆ ಬರುವಂತೆ ಹರ್ಸಿಮ್ರತ್ ಕೌರ್ ಬಾದಲ್ ಅವರ ರಾಜಿನಾಮೆ ಅಂಗೀಕರಿಸಿದ್ದಾರೆ.
ಇನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿದ್ದ ಹೊಸ ಕೃಷಿ ಮಸೂದೆಗೆ ಪಂಜಾಬ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ಕೇಂದ್ರ ಸಚಿವ ಸ್ಥಾನಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿದ್ದರು.